HEALTH TIPS

ರಾಜ್ಯ ಸರ್ಕಾರದ ವಾರ್ಷಿಕೋತ್ಸವ ಆಚರಣೆ; ವಿವಿಧ ಇಲಾಖೆಗಳ ಜಿಲ್ಲಾ ಸಭೆ

ಕಾಸರಗೋಡು: ರಾಜ್ಯ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವ ಏಪ್ರಿಲ್ 21 ರಂದು ಕಾಸರಗೋಡು ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಉದ್ಘಾಟನೆಯ ಭಾಗವಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. 

21 ರಿಂದ ಪಿಲಿಕೋಡ್ ಪಂಚಾಯತ್‍ನ ಕಾಲಿಕಡವ್‍ನಲ್ಲಿ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳವನ್ನು ಸಂಯೋಜಿಸುವ ಬಗ್ಗೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳ ಸಭೆ ನಡೆಸಿದ್ದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಇನ್ಭಾಶೇಖರ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ವಾರ್ಷಿಕ ಆಚರಣೆಯನ್ನು ಅದ್ಧೂರಿಯಾಗಿ ಯಶಸ್ವಿಗೊಳಿಸಲು ಎಲ್ಲಾ ಉದ್ಯೋಗಿಗಳ ಸಹಕಾರ ಅಗತ್ಯವಾಗಿದ್ದು, ಆಚರಣೆಯನ್ನು ಸಂಪನ್ನಗೊಳಿಸುವ ಚಟುವಟಿಕೆಗಳಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. 

ವಿವಿಧ ಇಲಾಖೆಗಳು ಸಿದ್ಧಪಡಿಸುವ ಮಳಿಗೆಗಳು, ವಿಭಾಗಗಳ ಕುರಿತಾದ ವಿವರವಾದ ದಾಖಲೆಗಳನ್ನು ಪ್ರಸ್ತುತಪಡಿಸಬೇಕು ಅದಕ್ಕಾಗಿ ಅತ್ಯುತ್ತಮ ತಂಡದ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಪ್ರಮುಖರು ಭಾಗವಹಿಸಿದ್ದರು.

ರಾಜ್ಯ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿದೆ. ಸ್ಥಳೀಯಾಡಳಿತ ಮಟ್ಟದಿಂದ ಜಿಲ್ಲಾ ಮತ್ತು ರಾಜ್ಯ ಮಟ್ಟದ ವರೆಗೆ ವಿವಿಧ ತರದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. 

ಎಲ್ಲಾ ಜಿಲ್ಲೆಗಳ ಕಾರ್ಯಕ್ರಮದಲ್ಲೂ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಯವರ ಕಾರ್ಯಕ್ರಮಗಳು ಏಪ್ರಿಲ್ 21 ರಂದು ಕಾಸರಗೋಡಿನಿಂದ ಪ್ರಾರಂಭಿಸಿ ಮೇ 21 ರಂದು ತಿರುವನಂತಪುರದಲ್ಲಿ ಮುಕ್ತಾಯಗೊಳ್ಳಲಿದೆ. 

ವಿವಿಧ ಸವಲತ್ತುಗಳನ್ನು ಪಡೆದ ಫಲಾನುಭವಿಗಳ ಹಾಗೂ ಪ್ರಮುಖ ವ್ಯಕ್ತಿಗಳ ಸಭೆಯನ್ನು ಆಯೋಜಿಸಲಾಗುವುದು. ಸರಕಾರದ ಅಭಿವೃದ್ಧಿ ಮತ್ತು ಕಲ್ಯಾಣ ಚಟುವಟಿಕೆಗಳು, ಸಾಧನೆಗಳನ್ನು ಪ್ರದರ್ಶಿಸುವ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳವು ಒಂದು ವಾರದ ನಡೆಯಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries