ಕಾಸರಗೋಡು: ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಚಿವೆ ಡಾ. ಆರ್. ಬಿಂದು ಇಂದು (ಮಾರ್ಚ್ 22) ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೇರಳ ರಾಜ್ಯ ಅಂಗವಿಕಲರ ಕಲ್ಯಾಣ ನಿಗಮ, ಕಾಸರಗೋಡು ಜಿಲ್ಲಾ ಪಂಚಾಯತಿ ಮತ್ತು ಜಿಲ್ಲಾ ಸಾಮಾಜಿಕ ನ್ಯಾಯ ಕಚೇರಿಯ ಜಂಟಿ ಆಶ್ರಯದಲ್ಲಿ ಇಂದು ಕಾಸರಗೋಡು ಜಿಲ್ಲೆಯಲ್ಲಿ ನವೀಕರಿಸಿದ ಜಿಲ್ಲಾ ಸಾಮಾಜಿಕ ನ್ಯಾಯ ಕಚೇರಿಯನ್ನು ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಚಿವೆ ಡಾ. ಆರ್. ಬಿಂದು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬೆಳಿಗ್ಗೆ 11 ಕ್ಕೆ ನಡೆಯಲಿರುವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎನ್.ಎ.ನೆಲ್ಲಿಕುನ್ನು ವಹಿಸಲಿದ್ದಾರೆ. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ. ಇನ್ಭಾಶೇಖರ್, ಜಿ.ಪಂ.ಉಪಾಧ್ಯಕ್ಷ ಶಾನವಾಸ್ ಪಾದೂರ್, ಇತರ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಐ.ಲೀಡ್ ಯೋಜನೆಯ ಭಾಗವಾಗಿ ರಚಿಸಲಾದ ಕಾಸರಗೋಡು ವಿಭಿನ್ನ ಸಾಮಥ್ರ್ಯದ ಜನರ ಕಲ್ಯಾಣ ಸಂಘದ ಕಚೇರಿಯನ್ನು ಸಚಿವರು ಉದ್ಘಾಟಿಸಲಿದ್ದಾರೆ.





