HEALTH TIPS

ಟ್ರಂಪ್‌ ಒಡೆತನದ ಸಾಮಾಜಿಕ ಮಾಧ್ಯಮ 'ಟ್ರುತ್'ನಲ್ಲಿ ಖಾತೆ ತೆರೆದ ಪ್ರಧಾನಿ ಮೋದಿ

ನವದೆಹಲಿ: ಟ್ರಂಪ್ ಮೀಡಿಯಾ ಮತ್ತು ಟೆಕ್ನಾಲಜಿ ಗ್ರೂಪ್‌ ಒಡೆತನದ ಸಾಮಾಜಿಕ ಮಾಧ್ಯಮ ವೇದಿಕೆ 'ಟ್ರುತ್ ಸೋಶಿಯಲ್‌'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಖಾತೆ ತೆರೆದಿದ್ದಾರೆ.

ತಮ್ಮ ಚೊಚ್ಚಲ ಪೋಸ್ಟ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್‌ ಅವರೊಂದಿಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ.

ಇದು 2019ರ ಸೆಪ್ಟೆಂಬರ್ 22ರಲ್ಲಿ ಟೆಕ್ಸಾಸ್‌ನಲ್ಲಿ ನಡೆದ 'ಹೌಡಿ ಮೋದಿ' ಕಾರ್ಯಕ್ರಮದ ಚಿತ್ರವಾಗಿದೆ.

ಇತ್ತೀಚೆಗೆ ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಜೊತೆ ಸಂದರ್ಶನದಲ್ಲಿ ಮೋದಿ ಅವರು ಭಾಗಿಯಾಗಿದ್ದರು. ಈ ಸಂದರ್ಶನದ ಲಿಂಕ್‌ ಅನ್ನು ಟ್ರಂಪ್ ತಮ್ಮ 'ಟ್ರುತ್‌' ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಟ್ರುತ್‌ನಲ್ಲಿ ಖಾತೆ ತೆರೆದ ಮೋದಿ, ಟ್ರಂಪ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

'ಟ್ರುತ್ ಸೋಶಿಯಲ್‌ನಲ್ಲಿ ಖಾತೆ ತೆರೆದಿರುವುದಕ್ಕೆ ಸಂತೋಷವಾಗಿದೆ. ಇಲ್ಲಿರುವ ಎಲ್ಲರೊಂದಿಗೆ ಸಂವಹನ ನಡೆಸಲು ಮತ್ತು ಮುಂದಿನ ದಿನಗಳಲ್ಲಿ ಅರ್ಥಪೂರ್ಣ ಸಂಭಾಷಣೆಗಳಲ್ಲಿ ತೊಡಗಿಕೊಳ್ಳಲು ಎದುರು ನೋಡುತ್ತಿದ್ದೇನೆ' ಎಂದು ಪೋಸ್ಟ್‌ನಲ್ಲಿ ಮೋದಿ ಬರೆದುಕೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries