ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿಯ ಸಾಯ ವಾರ್ಡು ಸದಸ್ಯ ಮಹೇಶ್ ಭಟ್ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತನದಿಂದ ಅಮಾನತು ಮಾಡಲಾಗಿದೆ. ನಿರಂತರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಲಭಿಸಿರುವ ವರದಿಯ ಹಿನ್ನೆಲೆಯಲ್ಲಿ ಪ್ರಾಥಮಿಕ ಸದಸ್ಯತನದಿಂದ ವಜಾ ಮಾಡಲಾಗಿದೆ. ಪಕ್ಷದ ರಾಜ್ಯ ಸಮಿತಿ ಅಧ್ಯಕ್ಷರ ಅನುಮತಿಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.




.jpeg)

