ತಿರುವನಂತಪುರಂ: ರಾಜ್ಯದಲ್ಲಿ ಬೇಸಿಗೆ ಮಳೆ ಮತ್ತು ಗಾಳಿ ತೀವ್ರಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಮಳೆಯೊಂದಿಗೆ ಗರಿಷ್ಠ 40 ಕಿ.ಮೀ ವೇಗದಲ್ಲಿ ಪ್ರಬಲ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಬೇಸಿಗೆಯ ಭಾರೀ ಮಳೆಯಿಂದ ಶಾಖ ಸ್ವಲ್ಪ ಕಡಿಮೆಯಾಗಿದ್ದರೂ, ಯುವಿ ಸೂಚ್ಯಂಕವು ಹೆಚ್ಚುತ್ತಲೇ ಇದೆ. ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ, ಬೆಳಿಗ್ಗೆ 11 ರಿಂದ ಅಪರಾಹ್ನ 3 ರವರೆಗೆ ಬಿಸಿಲಿಗೆ ಒಡ್ಡಿಕೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.





