HEALTH TIPS

ಮರಾಠಿ ಮಾತನಾಡದ್ದಕ್ಕೆ ಡಿ-ಮಾರ್ಟ್ ಸಿಬ್ಬಂದಿ ಮೇಲೆ MNS ಕಾರ್ಯಕರ್ತರಿಂದ ಹಲ್ಲೆ

: ಡಿ-ಮಾರ್ಟ್ ಮಳಿಗೆಯ.     ಸಿಬ್ಬಂದಿಯೊಬ್ಬರು ಮರಾಠಿ ಮಾತನಾಡದ್ದಕ್ಕೆ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಅಂಧೇರಿಯ ವರ್ಸೋವಾದಲ್ಲಿರುವ ಡಿ-ಮಾರ್ಟ್ ಮಳಿಗೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

'ನಾನು ಮರಾಠಿಯಲ್ಲಿ ಮಾತನಾಡುವುದಿಲ್ಲ. ಬದಲಾಗಿ ಹಿಂದಿಯಲ್ಲಿ ಮಾತ್ರ ಮಾತನಾಡುತ್ತೇನೆ. ನೀವು ಏನು ಬೇಕಾದರೂ ಮಾಡಿಕೊಳ್ಳಿ' ಎಂದು ಡಿ-ಮಾರ್ಟ್ ಸಿಬ್ಬಂದಿಯು ಗ್ರಾಹಕರ ಜತೆ ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.

ಈ ವಿಡಿಯೊ ವೀಕ್ಷಿಸಿದ ಬಳಿಕ ಎಂಎನ್‌ಎಸ್ ಪಕ್ಷದ ವರ್ಸೋವಾ ಘಟಕದ ಅಧ್ಯಕ್ಷ ಸಂದೇಶ್ ದೇಸಾಯಿ ನೇತೃತ್ವದ ಕಾರ್ಯಕರ್ತರ ಗುಂಪು ಡಿ-ಮಾರ್ಟ್ ನುಗ್ಗಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದೆ ಎಂದು ಆರೋಪಿಸಲಾಗಿದೆ.

ಡಿ-ಮಾರ್ಟ್ ಸಿಬ್ಬಂದಿಗೆ ಎಂಎನ್‌ಎಸ್ ಕಾರ್ಯಕರ್ತರು ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಡಿ-ಮಾರ್ಟ್ ಸಿಬ್ಬಂದಿ ಕ್ಷಮೆ ಕೋರುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries