ತಿರುವನಂತಪುರಂ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಏಳು ಜಿಲ್ಲೆಗಳಲ್ಲಿ ಆರಂಜ್ ಮತ್ತು ಏಳು ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಮಲಪ್ಪುರಂ, ಪಾಲಕ್ಕಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಳಂ, ಕೊಟ್ಟಾಯಂ, ತ್ರಿಶೂರ್, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸಮುದ್ರ ಕೊರೆತ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಮುಂದಿನ 3 ಗಂಟೆಗಳಲ್ಲಿ ಇಡುಕ್ಕಿ, ಎರ್ನಾಕುಳಂ, ಪಾಲಕ್ಕಾಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.




.webp)
