ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತ (ಇಸಿ) ಹುದ್ದೆಗಳಿಗೆ 2023ರ ಕಾಯ್ದೆ ಆಧರಿಸಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 14ರಂದು ನಡೆಸಲಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಾಂಕರ್ ದತ್ತಾ ಮತ್ತು ಉಜ್ಜಲ್ ಭೂಯಾನ್ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆಗೆ ದಿನಾಂಕ ನಿಗದಿ ಮಾಡಿತು.





