ನವದೆಹಲಿ: ಕರ್ನಾಟಕ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಶ್ರೀವಾಸ್ತವ ಸೇರಿದಂತೆ 18 ಐಎಎಸ್ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ವಿವಿಧ ಹುದ್ದೆಗೆ ನೇಮಿಸಿದೆ.
ಶ್ರೀವಾಸ್ತವ ಅವರು 1994ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ.
ಪ್ರಸ್ತುತ ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಕೇಂದ್ರ ಹಣಕಾಸು ಸಚಿವಾಲಯದ ರೆವಿನ್ಯೂ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಇದೇ ವೇಳೆ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಕುಮಾರ್ ಸಿನ್ಹಾ ಅವರು ಸಹ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಯಾಗಿದ್ದಾರೆ. ಸಿನ್ಹಾ ಮತ್ತು ಶ್ರೀವಾಸ್ತವ ಬ್ಯಾಚ್‌ಮೇಟ್ ಆಗಿದ್ದಾರೆ.
ನೇಮಕಾತಿ ಕುರಿತ ಸಂಪುಟ ಸಮಿತಿಯು (ಎಸಿಸಿ) ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಶುಕ್ರವಾರ ತಿಳಿಸಿದೆ.
ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ಸೇರಿದಂತೆ 18 ಐಎಎಸ್ ಅಧಿಕಾರಿಗಳನ್ನು ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳಿಗೆ ನೇಮಿಸಿದೆ.




