ದೀರ್ ಅಲ್ ಬಲಾಹ್: ಗಾಜಾ ಪಟ್ಟಣದಲ್ಲಿ ನಿರಾಶ್ರಿತರಿದ್ದ ಶಾಲೆಯ ಮೇಲೆ ಇಸ್ರೇಲ್ ರಾತ್ರೊರಾತ್ರಿ ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
ಇಸ್ರೇಲ್ ಹಾಗೂ ಗಾಜಾ ನಡುವಿನ ಯುದ್ಧವನ್ನು ಕೊನೆಗೊಳಿಸಲು 5ರಿಂದ 7 ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡು ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವ ಬಗ್ಗೆ ಅರಬ್‌ನ ಮಧ್ಯಸ್ಥಿಕೆದಾರರು ಮಾತುಕತೆ ನಡೆಸುತ್ತಿರುವ ಬೆನ್ನಲ್ಲೇ ಈ ದಾಳಿ ನಡೆದಿದೆ.
ದಾಳಿ ಕುರಿತಂತೆ ಗಾಜಾದ ಆರೋಗ್ಯ ಸಚಿವಾಲಯದ ಅಧಿಕಾರಿ ಜಹೇರ್ ಅಲ್- ವಹೇದಿ ಮಾಹಿತಿ ನೀಡಿದ್ದು, ದಾಳಿಯಲ್ಲಿ ಗಾಯಗೊಂಡಿರುವವರನ್ನು ಶಿಫಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ. ಆದರೆ, ಇಸ್ರೇಲ್ ಸೇನೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.




