ಪಟ್ನಾ: ಬಿಹಾರದ ಹಲವು ಜಿಲ್ಲೆಗಳಲ್ಲಿ ನಿನ್ನೆ (ಗುರುವಾರ) ಸುರಿದ ಸಿಡಿಲು ಸಹಿತ ಆಲಿಕಲ್ಲು ಮಳೆಯಿಂದಾಗಿ ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಕಚೇರಿ (CMO) ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, 'ನಳಂದನಲ್ಲಿ 18 ಮಂದಿ ಮೃತಪಟ್ಟಿದ್ದಾರೆ.
ಸಿವಾನ್‌ನಲ್ಲಿ ಇಬ್ಬರು, ಕತಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್‌ನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ' ಎಂದು ತಿಳಿಸಿದೆ.
ಬುಧವಾರ ಬಿಹಾರದ ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದು 13 ಜನರು ಮೃತಪಟ್ಟಿದ್ದಾರೆ.
ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮಧುಬನಿ, ದರ್ಭಾಂಗ, ಪೂರ್ವ ಚಂಪಾರಣ್, ಗೋಪಾಲ್‌ಗಂಜ್, ಪಶ್ಚಿಮ ಚಂಪಾರಣ್, ಕಿಶನ್‌ಗಂಜ್, ಅರಾರಿಯಾ, ಸುಪೌಲ್, ಗಯಾ, ಸಿತಾಮರ್ಹಿ, ನಳಂದಾ, ನಾವಡಾ, ಪಟ್ನಾದ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




