ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಏಪ್ರಿಲ್ 26ರಂದು ಪ್ರತಿಷ್ಠಾ ದಿನಾಚರಣೆ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಭೋಜನ ಪ್ರಸಾದ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಭಜನಾ ಸಂಕೀರ್ತನೆ, 11 ಗಂಟೆಗೆ ಧಾರ್ಮಿಕ ಸಭೆ, ಹಿರಿಯ ಸಾಧಕರಿಗೆ ಗೌರವಾರ್ಪಣೆ ನಡೆಯಲಿದ್ದು, ಭಗವದ್ಭಕ್ತರು ಪಾಲ್ಗೊಳ್ಳಬೇಕೆಂದು ತಿಳಿಸಲಾಗಿದೆ.




