ಉಪ್ಪಳ: ಕಾಸರಗೋಡು ಜಿಲ್ಲಾ ಲೇಖಕರ ಸಂಘದ ಆಶ್ರಯದಲ್ಲಿ ವಿಜಯಲಕ್ಷ್ಮೀ ಶ್ಯಾನುಭೋಗ್ ಅವರ ನೂತನ ಕಥಾ ಸಂಕಲನ ವ್ಯೂಹ ಕೃತಿಯ ಬಿಡುಗಡೆ ಮೇ.2 ರಂದು ಅಪರಾಹ್ನ 2.30 ಕ್ಕೆ ಪೈವಳಿಕೆ ಸಮೀಪದ ಬಾಯಿಕಟ್ಟೆ ಶ್ರೀಅಯ್ಯಪ್ಪ ಭಜನಾ ಮಂದಿರ ಸಭಾ ಭವನದಲ್ಲಿ ನಡೆಯಲಿದೆ.
ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಲೇಖಕರ ಸಂಘದ ಅಧ್ಯಕ್ಷ, ಹಿರಿಯ ಸಾಹಿತಿ ಡಾ.ರಮಾನಂದ ಬನಾರಿ ಕೃತಿ ಬಿಡುಗಡೆಗೊಳಿಸುವರು. ಸಾಹಿತಿ, ಶಿಕ್ಷಕಿ ಆಶಾ ದಿಲೀಪ್ ಸುಳ್ಯಮೆ ಕೃತಿ ಪರಿಚಯ ನೀಡುವರು. ಕಸಾಪ ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಕಸಾಪ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಸಾಮಾಜಿಕ ಕಾರ್ಯಕರ್ತ ಸದಾಶಿವ ಶೆಟ್ಟಿ ಮಂಜಲ್ತೋಡಿ, ಬಾಯಿಕಟ್ಟೆ ಶ್ರೀಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷ ಸುದರ್ಶನಪಾಣಿ ಬಲ್ಲಾಳ್, ಕವಯಿತ್ರಿ ಲಕ್ಷ್ಮೀ ವಿ.ಭಟ್, ಸಂಘಟಕ ಅಶೋಕ ಆಳ್ವ, ನಟ ಸುನಿಲ್ ಬಾಯಿಕಟ್ಟೆ ಉಪಸ್ಥಿತರಿದ್ದು ಶುಭಹಾರೈಸುವರು. ಬಳಿಕ ಹಿರಿಯ ಹಾಗೂ ವಿದ್ಯಾರ್ಥಿಗಳಿಂದ ಸ್ವರಚಿತ ಕವನ ವಾಚನ ನಡೆಯಲಿದೆ. ಕೃತಿಕರ್ತೆ ವಿಜಯಲಕ್ಷ್ಮೀ ಶ್ಯಾನುಭೋಗ್ ಮಾತನಾಡುವರು. ಜಿಲ್ಲಾ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪ್ರೊ.ಪಿ.ಎನ್.ಮೂಡಿತ್ತಾಯ, ಕಾರ್ಯದರ್ಶಿ ಸುಕುಮಾರ ಆಲಂಪಾಡಿ ಮೊದಲಾದವರು ನೇತೃತ್ವ ವಹಿಸುವರು.





