ನವದೆಹಲಿ: 1961ರ ಚುನಾವಣಾ ನಿಯಮಗಳ ತಿದ್ದುಪಡಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡಲು ಹೆಚ್ಚುವರಿ 3 ವಾರಗಳ ಕಾಲಾವಕಾಶ ಕೋರಿದ ಚುನಾವಣಾ ಆಯೋಗದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪುರಸ್ಕರಿಸಿದೆ. ಈ ಸಂಬಂಧ ಮುಂದಿನ ವಿಚಾರಣೆಯನ್ನು ಜುಲೈ 21ಕ್ಕೆ ನಿಗದಿಪಡಿಸಿದೆ.
ಚುನಾವಣಾ ನಿಯಮಗಳ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಜನವರಿ 15ರಂದೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ನೋಟಿಸ್ ಜಾರಿಗೊಳಿಸಿತ್ತು. ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಮಣೀಂದರ್ ಸಿಂಗ್ ಅವರು ಹೆಚ್ಚುವರಿ ಕಾಲಾವಕಾಶ ಕೋರಿದ್ದರು.




.webp)
