ಕಾಸರಗೋಡು: ಕಾರಿನಲ್ಲಿ 52ಕಿ.ಗ್ರಾಂ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಕೋಟ್ಟಾಯಂ ಪೊನ್‍ಕುನಂ ನಿವಾಸಿ ಕೆ.ಎ ನವಾಜ್(44) ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ(ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಅವರು ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. 2013 ಮೇ 13ರಂದು ಚೆಂಗಳ ಬೇವಿಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂದಿನ ಕಾಸರಗೋಡು ಠಾಣೆ ಇನ್ಸ್‍ಪೆಕ್ಟರ್ ಹಾಗೂ ಇಂದಿನ ಡಿವೈಎಸ್‍ಪಿ ಸಿ.ಕೆ ಸುನಿಲ್ ನೆತೃತ್ವದ ಪೊಲೀಸರ ತಂಡ ಕಾರಿನಲ್ಲಿ ಸಾಗಿಸುತ್ತಿದ್ದ 52ಕಿ.ಗ್ರಾಂ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.




