ನ್ಯೂಯಾರ್ಕ್: 2025-26ನೇ ಆರ್ಥಿಕ ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆಯನ್ನು ಭಾರತೀಯ ಹಣಕಾಸು ನಿಧಿಯು (ಐಎಂಎಫ್) ಪರಿಷ್ಕರಿಸಿದ್ದು, ಶೇ 6.2ರಷ್ಟು ಪ್ರಗತಿ ಕಾಣಲಿದೆ ಎಂದು ಅಂದಾಜಿಸಿದೆ.
ಈ ಮೊದಲು ಶೇ 6.5ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಅಂದಾಜಿಸಿತ್ತು.
ಗ್ರಾಮೀಣ ಪ್ರದೇಶದಲ್ಲಿನ ಬೇಡಿಕೆ ಹೆಚ್ಚಳವು ಆರ್ಥಿಕತೆ ಬೆಳವಣಿಗೆಗೆ ವೇಗ ನೀಡಲಿದೆ ಎಂದು ಮಂಗಳವಾರ ಬಿಡುಗಡೆಯಾಗಿರುವ ವಿಶ್ವ ಆರ್ಥಿಕ ಮುನ್ನೋಟದ ವರದಿ ಹೇಳಿದೆ.
2025ರಲ್ಲಿ ಜಾಗತಿಕ ಆರ್ಥಿಕತೆ ಬೆಳವಣಿಗೆಯು ಶೇ 2.8ರಷ್ಟು ಹಾಗೂ 2026ರಲ್ಲಿ ಶೇ 3ರಷ್ಟು ಪ್ರಗತಿ ಕಾಣಲಿದೆ ಎಂದು ಹೇಳಿದೆ.




