ಕೊಚ್ಚಿ: ಇಲ್ಲಿನ ಅಂಗಮಾಲಿಯಲ್ಲಿರುವ ಲಾಡ್ಜ್‌ವೊಂದರಲ್ಲಿ ಸುಮಾರು 9.5 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಒಡಿಶಾ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎರ್ನಾಕುಲಂ ಸ್ಥಳೀಯ ಪೊಲೀಸರು ಲಾಡ್ಜ್ ಮೇಲೆ ದಾಳಿ ನಡೆಸಿದರು.
ಈ ವೇಳೆ 9.5 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು, ಒಡಿಶಾ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.
ಆರೋಪಿಗಳು ವಿವಿಧ ಪ್ರದೇಶಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.




