HEALTH TIPS

ನ್ಯಾಷನಲ್‌ ಹೆರಾಲ್ಡ್‌ ಕೇಸ್: ತಾಕತ್ತಿದ್ದರೆ ನ್ಯಾಯಾಲಯದಲ್ಲಿ ಹೋರಾಡಿ-'ಕೈ'ಗೆ BJP

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ನ್ಯಾಯಾಲಯದ ಮೂಲಕವೇ ಹೋರಾಡಲಿ, ಬೀದಿಗಳಿದು ಹೋರಾಡಿ ನ್ಯಾಯಾಂಗ ವ್ಯವಸ್ಥೆಯ ಹಾದಿ ತಪ್ಪಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ತಿರುಗೇಟು ನೀಡಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಪರವಾಗಿ ಪ್ರತಿಭಟನಾ ಹೋರಾಟ ಮಾಡುತ್ತಿರುವವರನ್ನು ಟೀಕಿಸಿದೆ.

ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಅದರೊಂದಿಗೆ ವ್ಯವಹರಿಸಿ ಕೊನೆಗೆ ಸುಳ್ಳು ದಾಖಲೆ ಒದಗಿಸಿ ದೇಶದ ಸಂಪತ್ತನ್ನು ಲೂಟಿ ಹೊಡೆಯುವ ಸರಣಿ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಲೇ ಬಂದಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪರಿವಾರ ₹2 ಸಾವಿರ ಕೋಟಿ ಲೂಟಿ ಹೊಡೆಯಲು ಸಂಚು ರೂಪಿಸಿತ್ತು ಎಂದು ಆರೋಪಿಸಿದೆ.

ಕಾಂಗ್ರೆಸ್‌ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಾಗಿದೆ. ಕಾಂಗ್ರೆಸ್‌ ಭ್ರಷ್ಟಾಚಾರವನ್ನು ಬಿಡುವುದಿಲ್ಲ, ಭ್ರಷ್ಟಾಚಾರ ಕಾಂಗ್ರೆಸ್‌ ಪಕ್ಷವನ್ನು ಬಿಡುತ್ತಿಲ್ಲ. ಅಧಿಕಾರ ದುರುಪಯೋಗದ ಕಾರಣದಿಂದಾಗಿ ಸೋನಿಯಾ ಕುಟುಂಬದ ಭ್ರಷ್ಟಾಚಾರಗಳು ಹೊರಬರುತ್ತಿರಲಿಲ್ಲ ಎಂದು ಟೀಕಿಸಿದೆ.

ಕಾಂಗ್ರೆಸ್ಸಿನ ಸೋನಿಯಾ ಮೇನಿಯಾದ ವ್ಯಾಲಿಡಿಟಿ ಮುಗಿದ ಕಾರಣ ಈಗ ಎಲ್ಲವೂ ಬಯಲಾಗುತ್ತಿದೆ. ತನಿಖಾ ಸಂಸ್ಥೆಗಳು ದಾಖಲೆಗಳ ಆಧಾರದಲ್ಲಿ ತನಿಖೆ ನಡೆಸಿ, ಚಾರ್ಜ್‌ ಶೀಟ್‌ ಸಲ್ಲಿದರೆ ಅದಕ್ಕೂ ಕಾಂಗ್ರೆಸ್‌ ಪಕ್ಷ ರಾಜಕೀಯದ ಲೇಪ ಮೆತ್ತುತ್ತಿದೆ ಎಂದು ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries