HEALTH TIPS

ಲೋಕಸಭೆ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ನಿರ್ಣಯ ಅಂಗೀಕಾರ

ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯ ನಿರ್ಣಯವನ್ನು ಲೋಕಸಭೆಯಲ್ಲಿ ಗುರುವಾರ ಬೆಳಿಗ್ಗೆ ಅಂಗೀಕರಿಸಿಲಾಯಿತು.

ಸದನದಲ್ಲಿ ವಿರೋಧ ಪಕ್ಷಗಳು ಈ ನಿರ್ಣಯಕ್ಕೆ ಬೆಂಬಲ ಸೂಚಿಸದರೂ ಮಣಿಪುರದ ಇಂದಿನ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಕಾರಣ ಎಂದು ಟೀಕಿಸಿದವು.

ರಾಷ್ಟ್ರಪತಿ ಆಳ್ವಿಕೆ ಜಾರಿಯ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಗೃಹ ಸಚಿವ ಅಮಿತ್‌ ಶಾ, ಮಣಿಪುರದ ಈಶಾನ್ಯ ಭಾಗದಲ್ಲಿ ಸಾಮಾನ್ಯ ಸ್ಥಿತಿಯನ್ನು ಮರಳಿ ತರಲು ಎಲ್ಲಾ ಸಾಧ್ಯವಾದ ಕ್ರಮಗಳನ್ನು ತೆಗೆದುಕೊಳ್ಳಾಗಿದೆ ಎಂದು ಅವರು ಹೇಳಿದರು.

ಶಾಶ್ವತವಾಗಿ ಶಾಂತಿ ಸ್ಥಾಪಿಸಲು ಮೈತೇಯಿ ಮತ್ತು ಕುಕಿ ಸಮುದಾಯಗಳೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಣಿಪುರದಲ್ಲಿ ಜನಜೀವನ ಸಾಮಾನ್ಯ ಸ್ಥಿತಿಯತ್ತ ಮರಳುತ್ತಿದ್ದು, ಗೃಹ ಸಚಿವಾಲಯವು ಎರಡೂ ಸಮುದಾಯಗಳೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿದೆ. ಎರಡೂ ಸಮುದಾಯಗಳು ಪರಸ್ಪರ ಮಾತನಾಡಿದ್ದು, ಪರಿಸ್ಥಿತಿ ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಲೋಕಸಭೆಗೆ ಮಾಹಿತಿ ನೀಡಿದರು.

2023ರ ಮೇ ತಿಂಗಳಲ್ಲಿ ಪ್ರಾರಂಭವಾದ ಹಿಂಸಾಚಾರದಲ್ಲಿ ಇದುವರೆಗೆ 260 ಜನರು ಸಾವನ್ನಪ್ಪಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries