ಕಾಸರಗೋಡು: ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿಹಾಡುತ್ತಿರಯವ ಡಯಾಲೈಫ್ ಡಯಾಬಿಟಿಸ್ ಮತ್ತು ಕಿಡ್ನಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ಏಪ್ರಿಲ್ 24ರಂದು ಸಂಜೆ 5ಕ್ಕೆ ನಡೆಯಲಿದೆ. ಪಾಣಕ್ಕಾಡ್ ಸೈಯದ್ ಮುನವ್ವರ್ ಅಲಿ ಶಿಹಾಬ್ ತಙಳ್ ಉದ್ಘಾಟಿಸುವರು ಎಂದು ಆಸ್ಪತ್ರೆ ವ್ಯವಸ್ಥಾಪಕ ಪಾಲುದಾರ ಡಾ.ಐ.ಕೆ.ಮೊಯ್ದೀನ್ಕುಞÂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹಾಗೆ ಮಾಡುವುದಾಗಿ ಘೋಷಿಸಿದರು.
ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ನಲಪ್ಪಾಡ್ ಅಕಾಡೆಮಿ ಅಧ್ಯಕ್ಷ ಡಾ. ಎನ್. ಎ. ಮುಹಮ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್, ಸೈಯದ್ ಜಿಫ್ರಿ ಮುತ್ತುಕೋಯ ತಙಳ್ ಆಶೀರ್ವಚನ ನೀಡುವರು.
ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಯಲ್ಲಿ ಮಧುಮೇಹ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ತಜ್ಞ ಚಿಕಿತ್ಸೆಯನ್ನು ನೀಡುತ್ತಿದ್ದು, 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಜಿಲ್ಲೆಯ ಮೊದಲ ಆಸ್ಪತ್ರೆಯಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎನ್.ಎ ಅಬ್ದುಲ್ ಖಾದರ್ ನಲಪ್ಪಾಡ್, ಆಸಿಫ್ ಮೊಗ್ರಾಲ್, ಮೊಯ್ದೀನ್ ಕುಞÂ ಪಾದೂರು ಪಾಲ್ಗೊಮಡಿದ್ದರು.

