ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುರಂಕೋಟ್‌ನ ಲಸಾನಾ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಭದ್ರತಾ ಪಡೆ ಸಿಬ್ಬಂದಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ಆರಂಭಿಸಿದರು.
ಉಗ್ರರು ಎದುರಾಗುತ್ತಿದ್ದಂತೆಯೇ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಯ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

