ಮುಂಬೈ: ಮಹಾರಾಷ್ಟ್ರದಲ್ಲಿ ತೃತೀಯ ಭಾಷೆಯಾಗಿ ಹಿಂದಿಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಅನುಷ್ಠಾನಕ್ಕೆ ರಾಜ್ಯ ಭಾಷಾ ಸಮಾಲೋಚನಾ ಸಮಿತಿ ವಿರೋಧ ವ್ಯಕ್ತಪಡಿಸಿದೆ.
ಸಮಿತಿಯ ಮುಖಸ್ಥರಾದ ಲಕ್ಷ್ಮಿಕಾಂತ್ ದೇಶಮುಖ್ ಅವರು, ಎನ್‌ಇಪಿ ಜಾರಿ ನಿರ್ಧಾರವನ್ನು ಹಿಂಪಡೆಯುವಂತೆ ಕೋರಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಈ ವಿಚಾರವಾಗಿ ರಾಜಕೀಯ ವಾಕ್ಸಮರವೂ ಜೋರಾಗಿದ್ದು, ಶಿವಸೇನಾ (ಉದ್ಧವ್ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸಹ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.




