ತಿರುವನಂತಪುರಂ: ಮನೆ ಹೆರಿಗೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡುವುದು ಕ್ರಿಮಿನಲ್ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಅವೈಜ್ಞಾನಿಕ ವಿಧಾನಗಳ ಮೂಲಕ ಹೆರಿಗೆಯಾಗುವುದರಿಂದ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ. ಆದ್ದರಿಂದ, ಸಾರ್ವಜನಿಕ ಆರೋಗ್ಯ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿಭಾಗಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 400 ಹೆರಿಗೆಗಳು ಮನೆಯಲ್ಲಿಯೇ ನಡೆಯುತ್ತವೆ. ಕಳೆದ ವರ್ಷ ಏಪ್ರಿಲ್ ನಿಂದ ಈ ವರ್ಷ ಫೆಬ್ರವರಿ ವರೆಗೆ ಒಟ್ಟು 2,94,058 ಹೆರಿಗೆಗಳು ಸಂಭವಿಸಿವೆ. ಈ ಪೈಕಿ 382 ಹೆರಿಗೆಗಳು ಮನೆಯಲ್ಲಿಯೇ ನಡೆದಿವೆ. ಅನ್ಯರಾಜ್ಯ ಕಾರ್ಮಿಕರು ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಮನೆ ಹೆರಿಗೆಗಳು ಸಂಭವಿಸುತ್ತಿವೆ. ಇದಕ್ಕೆ ಕಾರಣಗಳನ್ನು ವಿವರವಾಗಿ ಅಧ್ಯಯನ ಮಾಡಿ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಚಿಕಿತ್ಸೆಯನ್ನು ನಿರಾಕರಿಸುವುದು ಅಪರಾಧ ಎಂದು ಸಚಿವರು ಸ್ಪಷ್ಟಪಡಿಸಿದರು.
ಸಾರ್ವಜನಿಕ ಪ್ರತಿನಿಧಿಗಳು ಮತ್ತು ಸಮುದಾಯ ಸಾಂಸ್ಕøತಿಕ ಸಂಸ್ಥೆಗಳ ಸಹಕಾರದೊಂದಿಗೆ ಮನೆ ಜನನದ ಋಣಾತ್ಮಕ ಅಂಶಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಸಾಮಾಜಿಕ ಮಾಧ್ಯಮ ಮತ್ತು ಯೂಟ್ಯೂಬ್ ಮೂಲಕ ಸುಳ್ಳು ಆರೋಗ್ಯ ಮಾಹಿತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು.





