HEALTH TIPS

ಇಲಾನ್ ಮಸ್ಕ್ ಜೊತೆ ಮೋದಿ ಮಾತುಕತೆ: ತಂತ್ರಜ್ಞಾನ, ನಾವೀನ್ಯತೆ ಒಡಂಬಡಿಕೆ ಚರ್ಚೆ

ನವದೆಹಲಿ: ಅಮೆರಿಕದ ಆಡಳಿತದಲ್ಲಿ ಭಾರಿ ಪ್ರಭಾವ ಹೊಂದಿರುವ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಇಲಾನ್ ಮಸ್ಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮಥ್ರ್ಯದ ಬಗ್ಗೆ ಚರ್ಚಿಸಿದ್ದಾರೆ.

ಟೆಸ್ಲಾ ಮತ್ತು ಸ್ಪೇಸ್‍ಎಕ್ಸ್ ಸೇರಿದಂತೆ ಬೃಹತ್ ಉದ್ಯಮ ಹೊಂದಿರುವ ಮಸ್ಕ್ ಜೊತೆ ಮಾತನಾಡಿದ ಬಳಿಕ ಎಕ್ಸ್‍ನಲ್ಲಿ ಮೋದಿ ಪೆÇೀಸ್ಟ್ ಮಾಡಿದ್ದಾರೆ.

ಇಲಾನ್ ಮಸ್ಕ್ ಅವರೊಂದಿಗೆ ಮಾತನಾಡಿದೆ. ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ನಮ್ಮ ಸಭೆಯ ವೇಳೆ ಚರ್ಚಿಸಿದ ವಿಷಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದೆವು. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮಥ್ರ್ಯದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಮೋದಿ ಬರೆದುಕೊಂಡಿದ್ದಾರೆ.

ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸಲು ಭಾರತ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಮಸ್ಕ್ ಅವರನ್ನು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಸರ್ಕಾರಿ ದಕ್ಷತೆ ಇಲಾಖೆಯನ್ನು (ಡಿಒಜಿಇ) ಮುನ್ನಡೆಸುತ್ತಿರುವ ಅವರು, ಸರ್ಕಾರಿ ವೆಚ್ಚವನ್ನು ಕಡಿತಗೊಳಿಸುವ ಮತ್ತು ಫೆಡರಲ್ ಕಾರ್ಯಪಡೆಯನ್ನು ತಗ್ಗಿಸುವ ಗುರಿಯನ್ನು ಹೊಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries