ಕಣ್ಣೂರು: ಸಿಪಿಎಂನ ಕಣ್ಣೂರು ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಕೆ.ಕೆ.ರಾಗೇಶ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಜಿಲ್ಲಾ ಕಾರ್ಯದರ್ಶಿ ಎಂ.ವಿ. ಜಯರಾಜನ್ ಅವರನ್ನು ರಾಜ್ಯ ಸಮಿತಿಗೆ ಸೇರಿಸಿದ ನಂತರ ಹೊಸ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಯಿತು.
ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಮಾಸ್ತರ್ ಸಮ್ಮುಖದಲ್ಲಿ ಇಂದು ಬೆಳಿಗ್ಗೆ ನಡೆದ ಜಿಲ್ಲಾ ನಾಯಕತ್ವ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಗೇಶ್ ಪ್ರಸ್ತುತ ಮುಖ್ಯಮಂತ್ರಿಗಳ ಖಾಸಗಿ ಕಾರ್ಯದರ್ಶಿಯಾಗಿದ್ದಾರೆ.





