ನವದೆಹಲಿ: ಶ್ರೀನಗರದಿಂದ ದೆಹಲಿಗೆ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಲ್ಯಾಂಡ್ ಆದ ಕೂಡಲೇ ಪೈಲಟ್ ಅನಾರೋಗ್ಯದಿಂದ ನಿಧನರಾಗಿರುವ ಘಟನೆ ವರದಿಯಾಗಿದೆ.
ರಾಷ್ಟ್ರ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ ಬಳಿಕ ಪೈಲಟ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿರಲಿಲ್ಲ.
ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಅನಾರೋಗ್ಯದಿಂದ ಸಹದ್ಯೋಗಿಯನ್ನು ಕಳೆದುಕೊಂಡಿದ್ದಕ್ಕೆ ತೀವ್ರವಾಗಿ ವಿಷಾದಿಸುತ್ತೇವೆ. ಈ ಸಂದರ್ಭದಲ್ಲಿ ಗೌಪ್ಯತೆಯನ್ನು ಗೌರವಿಸಿ ಅನಗತ್ಯ ವಿಚಾರಗಳನ್ನು ಹರಡದಂತೆ ವಿನಂತಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ಎಲ್ಲ ರೀತಿಯ ನೆರವು ನೀಡಲು ಬದ್ಧರಾಗಿದ್ದೇವೆ' ಎಂದು ಎರ್ ಇಂಡಿಯಾ ವಕ್ತಾರ ತಿಳಿಸಿದ್ದಾರೆ.
ಇನ್ನಷ್ಟೇ ಸಾವಿನ ಕುರಿತು ನಿಖರ ಕಾರಣ ತಿಳಿದು ಬರಬೇಕಿದೆ.




