ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಭಯೋತ್ಪಾದಕ ಆಸಿಫ್ ಶೇಖ್‌ನ ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿದ್ದ ಮನೆಯನ್ನು ಸ್ಫೋಟಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಈ ಸಂಬಂಧಿತ ವಿಡಿಯೊವನ್ನೂ ಪಿಟಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು,.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 23ರಂದು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಜನರನ್ನು ಕೊಂದಿದ್ದರು. ಆ ಬಳಿಕ, ಭದ್ರತಾ ಪಡೆ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದೆ.
ಈ ಮಧ್ಯೆ, ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಪಾಕಿಸ್ತಾನದೊಂದಿಗಿನ 1960ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಜಾರಿಗೆ ತರುವ ಅಧಿಸೂಚನೆಯನ್ನು ಭಾರತ ಹೊರಡಿಸಿದೆ.




