ಕಾಸರಗೋಡು: ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಏ. 29ರಂದು ಕಾಸರಗೋಡಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಾಧ್ಯಕ್ಷರಾದ ನಂತರ ಇದೆ ಮೊದಲ ಬರಿಗೆ ಕಾಸರಗೋಡಿಗೆ ಭೇಟಿನೀಡುತ್ತಿದ್ದಾರೆ.
ಬೆಳಿಗ್ಗೆ 8ಕ್ಕೆ ಕಾಸರಗೋಡು ಸಿಟಿ ಟವರ್‍ನಲ್ಲಿ ನಡೆಯಲಿರುವ ಕ್ಷೇತ್ರ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸುವ ಕೋರ್ ಕಮಿಟಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. 10ಕ್ಕೆ ಕಾಸರಗೋಡಿನ ಹೊಸ ಬಸ್ ನಿಲ್ದಾಣದ ವಠಾರದ ಆರ್.ಕೆ ಮಾಲ್ ಸಭಾಂಗಣದಲ್ಲಿ ವಿಕಸಿತ ಕೇರಳ ಸಮಾವೇಶ ಉದ್ಘಾಟಿಸುವರು. ಇದಕ್ಕೂ ಮೊದಲು ರಾಜ್ಯಾಧ್ಯಕ್ಷ ರಾಜೀವ್‍ಚಂದ್ರಶೇಖರ್ ಅವರನ್ನು ಹೊಸ ಬಸ್ ನಿಲ್ದಾಣ ಪ್ರದೇಶದಿಂದ ಆರ್.ಕೆ ಮಾಲ್ ಸಭಾಂಗಣಕ್ಕೆ ಭವ್ಯ ಸ್ವಾಗತದೊಂದಿಗೆ ಕರೆತರಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


