ಅಗರ್ತಲಾ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಅಗರ್ತಲಾ ರೈಲು ನಿಲ್ದಾಣದಲ್ಲಿ ಭದ್ರತಾ ಪಡೆಗಳು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ಪ್ರವೇಶಕ್ಕೆ ಸಹಾಯ ಮಾಡಿದ್ದ ತ್ರಿಪುರಾ ಮೂಲದ ಇತರ ಐವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಶನಿವಾರ ಕೋಲ್ಕತ್ತಗೆ ಪ್ರಯಾಣಿಸುತ್ತಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಯಿತು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆಗಾಗಿ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.




