ತಿರುವನಂತಪುರಂ: ಬಂಗಾಳಕೊಲ್ಲಿಯ ಮಧ್ಯ-ಪಶ್ಚಿಮ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ಘೋಷಿಸಿದೆ.
ಶುಕ್ರುವಾರ: ತಿರುವನಂತಪುರಂ, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಮತ್ತು ಶನಿವಾರ ಮಲಪ್ಪುರಂ, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಯೆಲ್ಲೋ ಎಚ್ಚರಿಕೆ ಘೋಷಿಸಲಾಗಿದೆ. ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.


