ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾದಲ್ಲಿನ ತನ್ನ ಷೇರಿನ ಪಾಲು ಶೇ 7.05ಕ್ಕೆ ಹೆಚ್ಚಳವಾಗಿದೆ ಎಂದು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ತಿಳಿಸಿದೆ.
ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚುವರಿಯಾಗಿ 10.45 ಕೋಟಿ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಇದರಿಂದ ಷೇರಿನ ಪಾಲು ಶೇ 5.03ರಿಂದ ಶೇ 7.05ಕ್ಕೆ ಏರಿದೆ ಎಂದು ನಿಗಮವು ಸೋಮವಾರ ಷೇರುಪೇಟೆಗೆ ತಿಳಿಸಿದೆ.




