ಇಂಫಾಲ: ಮಣಿಪುರದ ಇಂಫಾಲ ಪೂರ್ವ ಜಿಲ್ಲೆಯಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ (ಗುರುವಾರ) ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ನಿಷೇಧಿತ ಸಂಘಟನೆ ಕಂಗ್ಲೈ ಯಾವೋಲ್ ಕನ್ನಾ ಲುಪ್‌ನ ಸದಸ್ಯ ಓಯಿನಮ್ ರಬಿಚಂದ್ರ ಸಿಂಗ್ ಎಂಬಾತನನ್ನು ಸಾವೊಂಬಂಗ್ ಪ್ರದೇಶದಲ್ಲಿ ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.
ಆಂಡ್ರೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ ಶೋಧದಲ್ಲಿ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ)ಯ ಉಗ್ರನನ್ನು ಬಂಧಿಸಲಾಗಿದೆ. ಕೈರಾಂಗ್ ಗ್ರಾಮದಲ್ಲಿ ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಕ್ಷದ ಸದಸ್ಯ ಮೊಹಮ್ಮದ್ ಇಸ್ರಾಕ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.




