ನವದೆಹಲಿ: ಎಡಿಎಂ ನವೀನ್ ಬಾಬು ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅವರ ಪತ್ನಿ ಮಂಜುಷಾ ಸಿಬಿಐ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.
ಈ ಮನವಿಯನ್ನು ಹೈಕೋರ್ಟ್ ಈ ಹಿಂದೆ ತಿರಸ್ಕರಿಸಿತ್ತು. ತರುವಾಯ, ನವೀನ್ ಬಾಬು ಅವರ ಸಹೋದರ ಮತ್ತು ವಕೀಲ ಎಂ.ಆರ್. ರಮೇಶ್ ಬಾಬು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸುವಂತಿಲ್ಲ ಎಂಬ ತನ್ನ ಹಿಂದಿನ ನಿಲುವನ್ನು ನ್ಯಾಯಾಲಯ ಪುನರುಚ್ಚರಿಸಿತು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವನ್ನು ಪ್ರಸ್ತುತ ತನಿಖೆಯಲ್ಲಿ ಸೇರಿಸಲಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ರಾಜ್ಯ ಪೋಲೀಸರು ನಡೆಸುತ್ತಿರುವ ತನಿಖೆಯಲ್ಲಿ ತನಗೆ ನಂಬಿಕೆ ಇಲ್ಲ ಎಂದು ಮಂಜುಷಾ ಅರ್ಜಿಯಲ್ಲಿ ತಿಳಿಸಿದ್ದರು.
ಕಣ್ಣೂರು ಎಡಿಎಂ ನವೀನ್ ಬಾಬು ಸಾವಿನ ಪ್ರಕರಣದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಪಿ.ಪಿ. ದಿವ್ಯಾ ಅವರ ವಿರುದ್ಧ ರಾಜ್ಯ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾವಿನ ಸುತ್ತ ನಿಗೂಢತೆ ಇದೆ ಎಂದು ಕುಟುಂಬ ಹೇಳಿಕೊಂಡಿದೆ.





