ಕಾಸರಗೋಡು: ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಯಲ್ಲಿ ಕೆ.ಜಿ. ಮಾರಾರ್ ಅವರ ಕೊಡುಗೆ ಮಹತ್ತರವಾದುದು ಎಂದು ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ವಿ. ರವೀಂದ್ರನ್ ತಿಳಿಸಿದ್ದಾರೆ. ಅವರು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿಯ ಹಿರಿಯ ಮುಖಂಡ, ಸ್ವರ್ಗೀಯ ಕೆ.ಜಿ ಮಾರಾರ್ ಪುಣ್ಯತಿಥಿ ಸಮಾರಂಭದಲ್ಲಿ ಸಂಸ್ಮರಣಾ ಭಾಷಣ ಮಾಡಿದರು.
ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕೆ.ಜಿ ಮಾರಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನೀಲ್ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್ ವಂದಿಸಿದರು.


