HEALTH TIPS

ಆರ್ಥಿಕತೆಯಲ್ಲಿ ನಿರೀಕ್ಷಿತ ಪ್ರಗತಿ: ಲಂಡನ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ವಿಶ್ವಾಸ

ಲಂಡನ್‌ : 'ಆರ್ಥಿಕ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವ ಗುಣ ಮತ್ತು ದೇಶಿ ಮಾರುಕಟ್ಟೆಯ ಬೇಡಿಕೆಯು ಭಾರತವನ್ನು ಪ್ರಗತಿಯ ಪಥದಲ್ಲಿ ಮುಂದುವರಿಸಲಿದೆ' ಎಂದು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿಶ್ವಾಸ ವ್ಯಕ್ತಪಡಿಸಿದರು. 

'2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗಲು ಇರುವ ಅವಕಾಶ ಮತ್ತು ಸವಾಲುಗಳು' ಎಂಬ ವಿಷಯ ಕುರಿತು ಇಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಕೇಂದ್ರ ಸಂಪುಟದಲ್ಲಿ ಸಚಿವೆಯಾದ ಬಳಿಕ ಮೊದಲ ಬಾರಿಗೆ ಬ್ರಿಟನ್‌ಗೆ ಭೇಟಿ ನೀಡಿರುವ ಅವರು, 'ಭಾರತ ಮತ್ತು ಬ್ರಿಟನ್‌ ನಡುವಣ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ತಡವಾಗಿ ಆದರೂ, ಇದೊಂದು ಉತ್ತಮ ಬೆಳವಣಿಗೆಯಾಗಿದೆ' ಎಂದು ಹೇಳಿದರು.

ಭಾರತ ಐದು ವರ್ಷಗಳಿಂದ ನಿರಂತರವಾಗಿ ತ್ವರಿತಗತಿಯ ಆರ್ಥಿಕ ಅಭಿವೃದ್ಧಿಯನ್ನು ಕಾಣುತ್ತಿದೆ. ಸದ್ಯದಲ್ಲಿ ವೇಗ ಕಡಿಮೆ ಆಗಿರಬಹುದು. ಮುಂದೆ ನಿರೀಕ್ಷಿತ ಪ್ರಗತಿಯನ್ನು ಕಾಯ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries