ಕಾಸರಗೋಡು: ರಾಜ್ಯ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಉದ್ಘಾಟನೆಯ ಭಾಗವಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಪಿಲಿಕೋಡ್ ಪಂಚಾಯತ್‍ನ ಕಾಲಿಕಡವ್‍ನಲ್ಲಿ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳ ಆಯೋಜಿಸಲಿರುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ವಾರ್ಷಿಕ ಆಚರಣೆಯನ್ನು ಅದ್ಧೂರಿಯಾಗಿ ಯಶಸ್ವಿಗೊಳಿಸಲು ಎಲ್ಲಾ ಉದ್ಯೋಗಿಗಳ ಸಹಕಾರ ಅಗತ್ಯವಾಗಿದ್ದು, ಈ ಚಟುವಟಿಕೆಗಳಲ್ಲಿ ಎಲ್ಲ ಸಿಬ್ಬಂದಿ ಭಾಗವಹಿಸಬೇಕು. ವಿವಿಧ ಇಲಾಖೆಗಳು ಸಿದ್ಧಪಡಿಸುವ ಮಳಿಗೆಗಳು, ವಿಭಾಗಗಳ ಕುರಿತಾದ ವಿವರವಾದ ದಾಖಲೆಗಳನ್ನು ಪ್ರಸ್ತುತಪಡಿಸಬೇಕು ಅದಕ್ಕಾಗಿ ಅತ್ಯುತ್ತಮ ತಂಡದ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ರಾಜ್ಯ ಸರಕಾರದ ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿದೆ. ಸ್ಥಳೀಯಾಡಳಿತ ಮಟ್ಟದಿಂದ ಜಿಲ್ಲಾ ಮತ್ತು ರಾಜ್ಯ ಮಟ್ಟದ ವರೆಗೆ ವಿವಿಧ ತರದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಎಲ್ಲಾ ಜಿಲ್ಲೆಗಳ ಕಾರ್ಯಕ್ರಮದಲ್ಲೂ ಮುಖ್ಯಮಂತ್ರಿ ಭಾಗವಹಿಸಲಿದ್ದು, ಮುಖ್ಯಮಂತ್ರಿಯವರ ಕಾರ್ಯಕ್ರಮಗಳು ಏಪ್ರಿಲ್ 21 ರಂದು ಕಾಸರಗೋಡಿನಿಂದ ಪ್ರಾರಂಭಿಸಿ ಮೇ 21 ರಂದು ತಿರುವನಂತಪುರದಲ್ಲಿ ಮುಕ್ತಾಯಗೊಳ್ಳಲಿದೆ.
ವಿವಿಧ ಸವಲತ್ತುಗಳನ್ನು ಪಡೆದ ಫಲಾನುಭವಿಗಳ ಹಾಗೂ ಪ್ರಮುಖ ವ್ಯಕ್ತಿಗಳ ಸಭೆಯನ್ನು ಆಯೋಜಿಸಲಾಗುವುದು. ಸರ್ಕಾರದ ಅಭಿವೃದ್ಧಿ ಮತ್ತು ಕಲ್ಯಾಣ ಚಟುವಟಿಕೆಗಳು, ಸಾಧನೆಗಳನ್ನು ಪ್ರದರ್ಶಿಸುವ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳವು ಒಂದು ವಾರದ ಕಾಳ ನಡೆಯಲಿರುವುದಗಿ ಜಿಲ್ಲಾಧಿಕಾರಿ ತಿಳಿಸಿದರು.




