ಕೋಝಿಕ್ಕೋಡ್: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬುಧವಾರ ಸಾಲಿಡಾರಿಟಿ ಮತ್ತು ಎಸ್‍ಐಒ ನಡೆಸಿದ್ದ ಕೋಝಿಕ್ಕೋಡ್ ವಿಮಾನ ನಿಲ್ದಾಣ ಮುತ್ತಿಗೆಯಲ್ಲಿ ಭಾಗವಹಿಸಿದವರ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ. ಕೊಂಡೋಟ್ಟಿ ಡಿವೈಎಸ್ಪಿ ಈ ಆದೇಶ ಹೊರಡಿಸಿದ್ದಾರೆ.
ಪೋಲೀಸರ ಅನುಮತಿಯಿಲ್ಲದೆ ದಿಗ್ಬಂಧನವನ್ನು ಆಯೋಜಿಸಲಾಗಿದ್ದು, ಪ್ರತಿಭಟನೆಗಳು ಸಾರ್ವಜನಿಕರ ಸಂಚಾರ ಸ್ವಾತಂತ್ರ್ಯ, ಕೋಝಿಕ್ಕೋಡ್ ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಮತ್ತು ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟುಮಾಡಿದೆ ಎಂದು ಪೋಲೀಸ್ ಆದೇಶದಲ್ಲಿ ತಿಳಿಸಲಾಗಿದೆ. ಆದ್ದರಿಂದ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರ್ಯಕರ್ತರನ್ನು ಕರೆತಂದ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ವಾಹನ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ. ಕೊಂಡೋಟ್ಟಿ ಡಿವೈಎಸ್ಪಿ ಪ್ರವಾಸಿ ಬಸ್ ಮಾಲೀಕರಿಗೆ ನಿಷೇಧದ ಬಗ್ಗೆ ಮಾಹಿತಿ ನೀಡಿ ನೋಟಿಸ್ ಕಳುಹಿಸಿದ್ದಾರೆ.





