ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೇ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಆಕ್ಸಿಯಮ್-4 ಎಂಬ ಖಾಸಗಿ ಬಾಹ್ಯಾಕಾಶ ಯಾನ ಯೋಜನೆ ಮೂಲಕ ಶುಕ್ಲಾ ಅವರು ಬಾಹ್ಯಾಕಾಶಕ್ಕೆ ತೆರಳುತ್ತಿದ್ದಾರೆ.
ಭಾರತೀಯ ವಾಯುಸೇನೆಯ ಅನುಭವಿ ಟೆಸ್ಟ್ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, ಇಸ್ರೋದ ಮಾನವ ಬಾಹ್ಯಾಕಾಶ ಕಾರ್ಯಕ್ರಮದಡಿಯಲ್ಲಿ ಆಯ್ಕೆಯಾಗಿದ್ದಾರೆ. ಅಲ್ಲದೆ ಇಸ್ರೋನ ಮುಂಬರುವ ಗಗನಯಾನ ಯೋಜನೆಯಲ್ಲಿಯೂ ಶುಕ್ಲಾ ಅವರು ಇರಲಿದ್ದಾರೆ ಎನ್ನಲಾಗಿದೆ.