ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಇಂದು (ಮಂಗಳವಾರ) ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವು ಪ್ರವಾಸಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತರ ಏಳು ಮಂದಿ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಘಟನೆಯಲ್ಲಿ ಬದುಕುಳಿದ ಮಹಿಳೆಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಗುಂಡಿನ ಸದ್ದು ಕೇಳಿದ ಬಳಿಕ, ಪಹಲ್ಗಾಮ್ ಪಟ್ಟಣದ ಬೈಸರನ್ ಹುಲ್ಲುಗಾವಲಿಗೆ ಭದ್ರತಾ ಪಡೆಗಳು ಧಾವಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.




