ಕಾಸರಗೋಡು : ಇತಿಹಾಸ ಪ್ರಸಿದ್ಧ ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಲ್ಲಿ ಈ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಏಪ್ರಿಲ್ 9ರಂದು ಜರಗಲಿರುವುದು. ಎಡನೀರು ಶ್ರೀಮಠದ ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ನಡೆಯುವುದು.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 7,30 ರಿಂದ ಮಹಾಪೂಜೆ, 8.30 ಅಭಿಷೇಕ, 10.30ಕ್ಕೆ ಶ್ರೀಭೂತ ಬಲಿ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯುವುದು.




