ನವದೆಹಲಿ (PTI): ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು 23ನೇ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಕಾನೂನು ಸಚಿವಾಲಯ 'ಎಕ್ಸ್'ನಲ್ಲಿ ತಿಳಿಸಿದೆ.
23ನೇ ಕಾನೂನು ಆಯೋಗವನ್ನು ಕಳೆದ ವರ್ಷ ಸೆಪ್ಟೆಂಬರ್ 3ರಂದು ಮೂರು ವರ್ಷಗಳ ಅವಧಿಗೆ ರಚಿಸಲಾಗಿತ್ತು.





