ಸಮರಸ ಚಿತ್ರಸುದ್ದಿ: ಕಾಸರಗೋಡು: ಮಾಸಿಕ ಲಂಚ ಪಾವತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜೀನಾಮೆಗೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾಞಂಗಾಡ್ ಆರ್‍ಡಿಒ ಕಚೇರಿಗೆ ನಡೆಸಿದ ಮುತ್ತಿಗೆಯನ್ನು ಪೊಲೀಸರು ತಡೆದರು.





