ನವದೆಹಲಿ: 'ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯ ಹಿಂದೆ ರಾಜ್ಯದ ಮಾಜಿ ಸಿ.ಎಂ ಎನ್.ಬಿರೇನ್ ಸಿಂಗ್ ಪಾತ್ರವಿದೆ' ಎಂಬ ಆರೋಪಕ್ಕೆ ಸಂಬಂಧಿಸಿದ ಆಡಿಯೊದ ಸತ್ಯಾಸತ್ಯತೆ ಕುರಿತ ಪ್ರಯೋಗಾಲಯದ ವರದಿಯನ್ನು ಶೀಘ್ರವೇ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗುವುದು' ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲರ ಈ ಹೇಳಿಕೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಮಾನ್ಯ ಮಾಡಿತು.
ಅಲ್ಲದೆ, ಈ ಸಂಬಂಧ ಕುಕಿ ಸಂಘಟನೆಯ ಮಾನವ ಹಕ್ಕು ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೇ 5ರ ನಂತರ ನಡೆಸಲು ತೀರ್ಮಾನಿಸಿತು.




