ನವದೆಹಲಿ: ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುತ್ತಿರುವ ಒಲಿಂಪಿಕ್ ಪದಕ ವಿಜೇತೆ ಹಾಗೂ ನಿವೃತ್ತ ವೇಟ್‌ಲಿಫ್ಟರ್ ಕರ್ಣಂ ಮಲ್ಲೇಶ್ವರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶ್ಲಾಘಿಸಿದ್ದಾರೆ.
'ನಿನ್ನೆ (ಸೋಮವಾರ) ಯಮುನಾನಗರದಲ್ಲಿ ಒಲಿಂಪಿಕ್ ಪದಕ ವಿಜೇತೆ ಮತ್ತು ಖ್ಯಾತ ಕ್ರೀಡಾಪಟು ಕರ್ಣಂ ಮಲ್ಲೇಶ್ವರಿ ಅವರನ್ನು ಭೇಟಿಯಾದೆ.
ಕ್ರೀಡಾಪಟುವಾಗಿ ಅವರ ಸಾಧನೆ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಪ್ರಯತ್ನವೂ ಅಷ್ಟೇ ಶ್ಲಾಘನೀಯ' ಎಂದು ಪ್ರಧಾನಿ ಮೋದಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ವೇಟ್‌ಲಿಫ್ಟಿಂಗ್ ವಿಶ್ವ ಚಾಂಪಿಯನ್ ಆಗಿರುವ 49 ವರ್ಷದ ಕರ್ಣಂ ಮಲ್ಲೇಶ್ವರಿ ಅವರು 2000ರಲ್ಲಿ ಸಿಡ್ನಿಯಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.

