HEALTH TIPS

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ನೂತನ ಸಭಾಭವನಕ್ಕೆ ಶಿಲಾನ್ಯಾಸ

ಕುಂಬಳೆ: ಮುಜುಂಗಾವು ಶ್ರೀಭಾರತೀ ವಿದ್ಯಾಪೀಠ 24 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಪ್ರಯುಕ್ತ ಶಾಲೆಯ ನೂತನ ಸಭಾಭವನದ ಕಟ್ಟಡಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ಟರ ನೇತೃತ್ವದಲ್ಲಿ ಬುಧವಾರ ಜರಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಲಾನ್ಯಾಸ ನೆರವೇರಿಸಿದ  ಉದ್ಯಮಿ, ಮುಂಡಪ್ಪಳ್ಳ ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ ಮಾತನಾಡಿ, ದೇವಾಲಯ ಮತ್ತು ವಿದ್ಯಾಲಯ ಇವೆರಡೂ ಸಮಾಜಕ್ಕೆ ಅತ್ಯಂತ ಪವಿತ್ರ, ವಿದ್ಯಾಲಯದಲ್ಲಿ ನಾವು ವಿದ್ಯಾರ್ಥಿಗಳ ರೂಪದಲ್ಲಿ ಪ್ರತ್ಯಕ್ಷ ದೇವರನ್ನು ಕಾಣಬಹುದು ಎಂದರಲ್ಲದೆ, ಈ ವಿದ್ಯಾಸಂಸ್ಥೆಗೆ ತಮ್ಮ ಸಹಕಾರ ಮತ್ತು ಬೆಂಬಲ ಸದಾ ಇರಲಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಲಯದ ಹಾಗೂ ರಜತೋತ್ಸವ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ವಹಿಸಿ ಎಲ್ಲರ ಸಹಕಾರವನ್ನು ಬಯಸಿದರು. ಮುಳ್ಳೇರಿಯ ಹವ್ಯಕ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ಹವ್ಯಕ ಅಭ್ಯುದಯ ಟ್ರಸ್ಟ್‍ನ ಪ್ರಾರಂಭಿಕ ಸದಸ್ಯ ಎಚ್.ಶಿವರಾಮ ಭಟ್ ಕಾರಿಂಜ ಹಳೆಮನೆ, ಹವ್ಯಕ ಮಹಾಮಂಡಲ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ, ಹವ್ಯಕ ಕುಂಬಳೆ ವಲಯಾಧ್ಯಕ್ಷ ಡಾ. ಡಿ.ಪಿ ಭಟ್ ಕುಂಬಳೆ, ಹವ್ಯಕ ಮುಳ್ಳೇರಿಯ ಮಂಡಲ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆರೆಮೂಲೆ ಉಪಸ್ಥಿತರಿದ್ದು ಶುಭ ಹಾರೈಸಿದರು.  ಶಾಲಾ ಮುಖ್ಯ ಶಿಕ್ಷಕ ಶಾಮ್ ಭಟ್ ದರ್ಬೆಮಾರ್ಗ, ವಿದ್ಯಾಲಯದ ರಜತೋತ್ಸವ ವರ್ಷದ ಕಾರ್ಯಯೋಜನೆಗಳ ಬಗ್ಗೆ  ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಸಮಿತಿ ಪದಾಧಿಕಾರಿಗಳು, ರಜತೋತ್ಸವ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ರಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಪೆರಡಾನ ಕಾರ್ಯಕ್ರಮ ನಿರೂಪಿಸಿದರು.  ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ  ಬಾಲಕೃಷ್ಣ ಶರ್ಮ ಅನಂತಪುರ ಸ್ವಾಗತಿಸಿ, ರಜತೋತ್ಸವ ಸಮಿತಿ ಕಾರ್ಯದರ್ಶಿ ಗೋಪಾಲಕೃಷ್ಣ ಭಟ್ ಶೇಡಿಗುಮ್ಮೆ ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries