ಕಾಸರಗೋಡು: ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಹೊಸ ಬಸ್ ನಿಲ್ದಾಣದ ಸುತ್ತಮುತ್ತಲ ಪ್ರದೇಶದಲ್ಲಿ ಮೇಣದ ಬತ್ತಿಗಳನ್ನು ಬೆಳಗಿಸಿತು. ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್‍ನೇತೃತ್ವದಲ್ಲಿ ಮೇಣದ ಬತ್ತಿಯನ್ನು ಬೆಳಗಿಸಲಾಯಿತು. ಬಿಜೆಪಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್, ಸವಿತಾ ಟೀಚರ್, ಸಂಜೀವ ಪುಳಿಕೂರು, ಪಿ.ರಮೇಶ್, ಪುಷ್ಪಾ ಗೋಪಾಲನ್, ಪ್ರಮೀಳಾ ಮಜಲ್, ವೀಣಾ ಅರುಣ್ ಶೆಟ್ಟಿ, ಶ್ರೀಲತಾ ಟೀಚರ್, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಗೋಪಾಲಕೃಷ್ಣ, ರಮೇಶ್ ವಿವೇಕಾನಂದ ನಗರ, ಶ್ರೀಧರ ಕೂಡ್ಲು, ಸುಕುಮಾರ ಕುದುರೆಪ್ಪಾಡಿ, ಅರುಣ್ ಶೆಟ್ಟಿ ನೇತೃತ್ವ ವಹಿಸಿದ್ದರು.
ಬಿಜೆಪಿ ಜಿಲ್ಲಾ ಸಮಿತಿಯು ಹೊಸ ಬಸ್ ನಿಲ್ದಾಣದ ಸುತ್ತಮುತ್ತಲ ಪ್ರದೇಶದಲ್ಲಿ ಮೇಣದಬತ್ತಿಗಳನ್ನು ಬೆಳಗಿಸಿತು.





