ಕೊಚ್ಚಿ: ಸಿಎಂಆರ್‍ಎಲ್ ಭ್ರಷ್ಟಾಚಾರ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಜಾರ್ಜ್ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನೀಡಿ ವೀಣಾ ಅವರನ್ನು ಆರೋಪಿಯನ್ನಾಗಿ ಮಾಡಿದ ನಂತರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಗಂಭೀರ ಭ್ರಷ್ಟಾಚಾರದ ಸ್ಪಷ್ಟ ಪುರಾವೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರನ್ ಒತ್ತಾಯಿಸಿದರು. ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯಮಂತ್ರಿಗಳ ಪ್ರತಿಕೃತಿಗಳನ್ನು ದಹಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದವರು ತಿಳಿಸಿರುವರು.
ಕೇರಳ ಕರಾವಳಿಯಲ್ಲಿ 1 ಲಕ್ಷ ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕ ಶಾನ್ ಜಾರ್ಜ್ ಹೇಳಿದ್ದು, ಕಪ್ಪು ಮರಳು ಗಣಿಗಾರಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿರುವರು.





