ನವದೆಹಲಿ: ಭೂಮಿ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲವು ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಮೊದಲು ಏಪ್ರಿಲ್ 8ರಂದು ಸಮನ್ಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಲಿಲ್ಲ.
ಹರಿಯಾಣದ ಶಿಕೊಪುರದಲ್ಲಿ ನಡೆದಿರುವ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ವಾದ್ರಾ ಅವರಿಗೆ ಸೇರಿದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿ ಗುರುಗ್ರಾಮ ಸೆಕ್ಟರ್ 83, ಶಿಕೊಪುರ, ಸಿಕಂದರ್‌ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ ₹7.5 ಕೋಟಿಗೆ ಭೂಮಿ ಖರೀದಿಸಿ, ಅದನ್ನು ₹55 ಕೋಟಿಗೆ ಮಾರಾಟ ಮಾಡಿದೆ ಎಂದು ದೂರು ನೀಡಲಾಗಿತ್ತು.
ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸುವಂತೆ ಇ.ಡಿ ಸಮನ್ಸ್ ಜಾರಿ ಮಾಡಿದೆ.

