HEALTH TIPS

Mumbai: ಇಡಿ ಕಚೇರಿಯಲ್ಲಿ ಭಾರಿ ಬೆಂಕಿ ಅವಘಡ, 12 ಗಂಟೆ ಕಾರ್ಯಾಚರಣೆ, ಕಡತ, ಪೀಠೋಪಕರಣಗಳಿಗೆ ಹಾನಿ!

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿ ಕಟ್ಟಡದಲ್ಲಿ ಭಾನುವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಕೈಸರ್-ಐ-ಹಿಂದ್ ಕಟ್ಟಡದಲ್ಲಿರುವ ಇಡಿ ಕಚೇರಿಯಲ್ಲಿ ಇದಕ್ಕಿದ್ದಂತೆ ಭಾರೀ ಬೆಂಕಿ ಉಂಟಾಗಿದ್ದು, ಎಂಟು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ, ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಲಾಯಿತು ಎಂದು ಮುಂಬೈ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಡಿ ಕಚೇರಿಯ ಐದು ಅಂತಸ್ತಿನ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಮಾತ್ರ ಬೆಂಕಿ ಉಂಟಾಗಿದೆ. ಆದರೆ, ಕಡತಗಳು, ಪೀಠೋಪಕರಣಗಳು ಸುಟ್ಟುಹೋಗಿರುವುದಾಗಿ ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಬಾಗಿಲು, ಕಿಟಕಿಗಳನ್ನು ಒಡೆದು ಕಟ್ಟಡದೊಳಗೆ ಪ್ರವೇಶಿಸಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಅವಘಡಕ್ಕೆ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದ್ದು, ಪೀಠೋಪಕರಣಗಳು, ಬೀರುಗಳು ಮತ್ತು ವಿದ್ಯುತ್ ಅಳವಡಿಕೆಗಳಿಗೆ ಹಾನಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ತಂಡಗಳು ಸ್ಥಳದಲ್ಲಿದ್ದು ಪಂಚನಾಮೆ ನಡೆಸುತ್ತಿವೆ. ಇಡಿ ಸಿಬ್ಬಂದಿ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡವನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಪೊಲೀಸರು ವಿವರವಾದ ಪಂಚನಾಮೆ ನಡೆಸಿ ದಾಖಲೆಗಳನ್ನು ತೆಗೆದುಕೊಂಡಿದ್ದರೂ ಇಡಿ ಯಾವುದೇ ದೂರು ದಾಖಲಿಸಿಲ್ಲ ಎಂದು ಅವರು ಹೇಳಿದರು. ಬೆಂಕಿಯಲ್ಲಿ ಹಲವಾರು ದಾಖಲೆಗಳು ಮತ್ತು ಉಪಕರಣಗಳು ಸುಟ್ಟು ಹೋಗಿರಬಹುದು ಅಥವಾ ಹಾನಿಗೊಳಗಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries