ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಶುಕ್ರವಾರ ಕನಿಷ್ಠ 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣಾದರು. ಅವರಲ್ಲಿ 12 ಮಂದಿಯ ತಲೆಗೆ ₹40.5 ಲಕ್ಷ ಬಹುಮಾನ ಇತ್ತು ಎಂದು ಪೊಲೀಸರು ತಿಳಿಸಿದರು. ಶರಣಾದವರಲ್ಲಿ 9 ಮಂದಿ ಮಹಿಳೆಯರು.
ಟೊಳ್ಳು ಮತ್ತು ಅಮಾನವೀಯ ಮಾವೋವಾದಿ ಸಿದ್ಧಾಂತ ಮತ್ತು ಸ್ಥಳೀಯ ಬುಡಕಟ್ಟು ಜನಾಂಗದವರ ಮೇಲಿನ ದೌರ್ಜನ್ಯಗಳಿಂದ ನಿರಾಸೆಗೊಂಡು ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳ (ಸಿಆರ್‌ಪಿಎಫ್) ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದರು.





